ನವದೆಹಲಿ: ಕೇರಳದ ಕೊಯಿಕ್ಕೋಡ್‌ನ ವಿಮಾನ ಅಪಘಾತದಲ್ಲಿ ಗಾಯಗೊಂಡಿದ್ದ 56 ಪ್ರಯಾಣಿಕರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

‘ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿ, ಸಂಪೂರ್ಣ ಗುಣಮುಖರಾಗಿದ್ದಾರೆಂಬುದನ್ನು ಖಚಿತಪಡಿಸಿಕೊಂಡ ನಂತರ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ‘ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆಯ ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುಬೈನಿಂದ ಕೊಯಿಕ್ಕೋಡ್‌ಗೆ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಶುಕ್ರವಾರ ಕೊಯಿಕ್ಕೋಡ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಮೂವರು ತೀವ್ರವಾಗಿ ಗಾಯಗೊಂಡಿದ್ದರು. 23 ಮಂದಿಯನ್ನು ಅಂದೇ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.