ಶುಕ್ರವಾರ, ಮಾರ್ಚ್ 31, 2023
23 °C

ಸಾರ್ವಜನಿಕರಿಗಾಗಿ ಶಾಂಘುಮುಖಂ ಬೀಚ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಅನ್ನು ಗುರುವಾರ ಇಲ್ಲಿನ ಶಾಂಘುಮುಖಂ ಬೀಚ್‌ನಲ್ಲಿ ಸಾರ್ವಜನಿಕರಿಗಾಗಿ ಪ್ರದರ್ಶಿಸಿತು. 

2002ರ ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಅದರ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರಿಗೆ ಪ್ರದರ್ಶಿಸಲಾಯಿತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಬಾಬು ಹೇಳಿದ್ದಾರೆ. 

‘ಸಾರ್ವಜನಿಕರಿಂದ ಪ್ರದರ್ಶನಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನು ನೋಡಲು ಸಾಕಷ್ಟು ಜನರು ಬಂದಿದ್ದರು. ಈ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಇದನ್ನು ರಾಜ್ಯದಾದ್ಯಂತ ವಿವಿಧ ಸ್ಥಳಗಳಲ್ಲಿ ತೋರಿಸುತ್ತೇವೆ’ ಎಂದು ಬಾಬು ತಿಳಿಸಿದರು. 

ಕೆಪಿಸಿಸಿ ಸಾಕ್ಷ್ಯಚಿತ್ರದ ಪರಿಚಯ ಭಾಗವನ್ನು ಮತ್ತು ಎರಡನೇ ಭಾಗವನ್ನು ಪ್ರದರ್ಶನದಲ್ಲಿ ತೋರಿಸಿದೆ.  ಸಾಕ್ಷ್ಯಚಿತ್ರದಲ್ಲಿ ಏನಿದೆ ಮತ್ತು ಯಾವುದರ ಕುರಿತಾಗಿದೆ ಎಂದು ತಿಳಿಯಲು ಜನರು ಬಯಸುತ್ತಾರೆ ಎಂಬುದನ್ನು ಈ ಪ್ರತಿಕ್ರಿಯೆ ಸೂಚಿಸುತ್ತದೆ ಎಂದು ಅವರು ಹೇಳಿದರು. 

ಕಾಂಗ್ರೆಸ್‌ನ ವಿವಿಧ ವಿಭಾಗಗಳು ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಪ್ರದರ್ಶಿಸಿವೆ. ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ಹಂಚಿಕೊಂಡಿದ್ದ  ಯೂಟ್ಯೂಬ್  ಮತ್ತು ಟ್ವಿಟರ್ ಪೋಸ್ಟ್‌ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು