ಭಾನುವಾರ, ಜುಲೈ 3, 2022
21 °C

ಹೋರಾಟ ಬೆಂಬಲಿಸಿದ ಅಂತರರಾಷ್ಟ್ರೀಯ ಗಣ್ಯರಿಗೆ ಧನ್ಯವಾದ ಸಲ್ಲಿಸಿದ ರೈತ ನಾಯಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಅಂತರರಾಷ್ಟ್ರೀಯ ಗಣ್ಯರಿಗೆ ರೈತ ನಾಯಕರು ಧನ್ಯವಾದ ಸಲ್ಲಿಸಿದ್ದಾರೆ. 

ಈ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿರುವ ಕ್ರಾಂತಿಕಾರಿ ಕಿಸಾನ್‌ ಯುನಿಯನ್‌ ನಾಯಕ ದರ್ಶನ್‌ ಪಾಲ್‌ ಸಿಂಗ್‌, 'ನಮ್ಮ ಆಂದೋಲನವನ್ನು ಬೆಂಬಲಿಸಿರುವ ಅಂತರರಾಷ್ಟ್ರೀಯ ಗಣ್ಯರಿಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ. 

ಇದೇ ವೇಳೆ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದರ್ಶನ್‌ ಪಾಲ್‌ ಸಿಂಗ್‌, 'ಕಾಯ್ದೆಗಳಲ್ಲಿ ಏನಾದರೂ ಸಮಸ್ಯೆಗಳಿದ್ದರೆ ತಿದ್ದುಪಡಿ ಮಾಡುತ್ತೇವೆ ಎಂದು ನಮಗೆ ತೋಮರ್‌ ಹೇಳಿದ್ದರು. ಆದರೆ, ನಿನ್ನೆ(ಶುಕ್ರವಾರ) ರಾಜ್ಯಸಭೆಯಲ್ಲಿ ಮಾತನಾಡುವಾಗ ಕಾಯ್ದೆಗಳು ರೈತರ ಹಿತಾಸಕ್ತಿಗಳನ್ನು ಕಾಪಾಡಲಿವೆ ಎಂಬುದಾಗಿ ತಿಳಿಸಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ' ಎಂದು ಹರಿಹಾಯ್ದಿದ್ದಾರೆ. 

ಕಳೆದ ವರ್ಷ ನವೆಂಬರ್ 26ರಿಂದ ಆರಂಭವಾಗಿರುವ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್ ಟಿಕಾಯತ್ ಮುನ್ನಡೆಸುತ್ತಿದ್ದಾರೆ. ಈ ನಡುವೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಹಿಂಸಾಚಾರ ನಡೆದಿತ್ತು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಗಾಜಿಪುರ, ಟಿಕ್ರಿ ಹಾಗೂ ಸಿಂಘು ಪ್ರತಿಭಟನಾ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು