ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Krishna Janmashtami: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ

Last Updated 30 ಆಗಸ್ಟ್ 2021, 5:22 IST
ಅಕ್ಷರ ಗಾತ್ರ

ನವದೆಹಲಿ: ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಗಣ್ಯರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.

‘ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲ ಜನರಿಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ಶ್ರೀಕೃಷ್ಣನ ಜೀವನ ಚರಿತ್ರೆಯ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರ ಸಂದೇಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಲು ಒಂದು ಅವಕಾಶವಾಗಿದೆ. ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ’ ಎಂದು ರಾಷ್ಟ್ರಪತಿಗಳು ಟ್ವೀಟ್ ಮಾಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಶ್ರೀಕೃಷ್ಣ ನಾಡಿಗೆ ಎದುರಾಗಿರುವ ಎಲ್ಲ ದುರಿತಗಳನ್ನು ದೂರಮಾಡಲಿ. ಎಲ್ಲರಿಗೂ ಸುಖ, ಸಮೃದ್ಧಿ, ಆರೋಗ್ಯಗಳನ್ನು ಕರುಣಿಸಲಿ. ದೇವೋತ್ತಮನಾದ ಆ ಪಾರ್ಥಸಾರಥಿಯು ನಮ್ಮೆಲ್ಲರನ್ನೂ ಸನ್ಮಾರ್ಗದಲ್ಲಿ ನಡೆಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಾಶಯಗಳು. ದುಷ್ಟತನವನ್ನು ಕೊನೆಗೊಳಿಸಲು, ಭಕ್ತ ಜನರನ್ನು ರಕ್ಷಿಸಲು, ಧರ್ಮವನ್ನು ಎತ್ತಿಹಿಡಿಯಲು ಯುಗಯುಗದಲ್ಲೂ ಅವತರಿಸುವ ಭಗವಂತ ಶ್ರೀಕೃಷ್ಣ, ಎಲ್ಲ ರೋಗ ರುಜಿನಗಳನ್ನು ನಾಶಮಾಡಿ, ಎಲ್ಲರಿಗೂ ಮಂಗಳವನ್ನು ಉಂಟುಮಾಡಲಿ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನೋಯ್ಡಾದ ಇಸ್ಕಾನ್ ದೇಗುಲದಲ್ಲಿ ಬೆಳಿಗ್ಗೆಯಿಂದಲೇ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬ ಆಚರಣೆಯ ವಿಡಿಯೊವನ್ನು ‘ಎಎನ್‌ಐ’ ಟ್ವೀಟ್ ಮಾಡಿದೆ.

ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋಮವಾರ ಬೆಳಿಗ್ಗೆ ವಿಶೇಷ ಪೂಜೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT