ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿ ನೀರು ವಿವಾದ: 2 ವಾರ ಸಮಯ ಕೇಳಿದ ಕೇಂದ್ರ

Last Updated 29 ನವೆಂಬರ್ 2021, 15:52 IST
ಅಕ್ಷರ ಗಾತ್ರ

ನವದೆಹಲಿ: ಕೃಷ್ಣಾ ನದಿ ನೀರು ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವಂತೆ ಕೋರಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ನಿರ್ಧರಿಸಲು ತನಗೆ ಎರಡು ವಾರಗಳ ಸಮಯ ನೀಡಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಅನ್ನು ಕೇಳಿಕೊಂಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಎದುರು ಸೋಮವಾರ ಈ ವಿಚಾರ ಬಂದಾಗ, ಸರ್ಕಾರದ ಪರ ಹಿರಿಯ ವಕೀಲ ವಾಸೀಂ ಖಾದ್ರಿ ಅವರು ಕೇಂದ್ರ ಜಲ ಶಕ್ತಿ ಸಚಿವಾಲಯದಿಂದ ಸೂಚನೆ ಪಡೆಯಲು ಎರಡು ವಾರ ಬೇಕು ಎಂದರು. ಈ ವಿಷಯ ಸರ್ಕಾರದ ಪರಿಗಣನೆಯಲ್ಲಿದೆ ಎಂದು ಅವರು ತಿಳಿಸಿದರು. ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಡಿ.13ಕ್ಕೆ ಮುಂದೂಡಿತು.

2022ರ ಜೂನ್‌ನಿಂದ ತನ್ನ ಪಾಲಿನ 75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಹಾಗೂ ಆ ಮೂಲಕ 5.94 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸಲಿಕ್ಕಾಗಿ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಕರ್ನಾಟಕ ಪರ ಹಿರಿಯ ವಕೀಲ ಶ್ಯಾಮ್‌ ದಿವಾನ್‌ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT