ಸೋಮವಾರ, ಸೆಪ್ಟೆಂಬರ್ 26, 2022
24 °C

ಮೋದಿಗೆ ಸವಾಲು ಒಡ್ಡುವ ನಾಯಕರಲ್ಲ ನಿತೀಶ್: ಸುಶೀಲ್ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಒಡ್ಡುವ ನಾಯಕರೇ ಅಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಹೇಳಿದರು.

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಹೊರಹೊಮ್ಮುವ ನಿರೀಕ್ಷೆಯನ್ನು ತಿರಸ್ಕರಿಸಿದ ಸುಶೀಲ್ ಮೋದಿ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಟಿಆರ್‌ಎಸ್‌ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರಂತಹ ದೊಡ್ಡವರು ಇದ್ದಾರೆ ಎಂದು ಹೇಳಿದರು.

ತವರು ರಾಜ್ಯ ಬಿಹಾರದಲ್ಲಿಯೂ ಜೆಡಿಯು ನಾಯಕರ ಪ್ರಭಾವ ಕಡಿಮೆಯಾಗುತ್ತಿದೆ. ನಿತೀಶ್ ಅವರಿಗಿಂತ ದೊಡ್ಡ ಜನಾದೇಶ ಹೊಂದಿರುವ ಮಮತಾ ಬ್ಯಾನರ್ಜಿ,  ಕೆ. ಚಂದ್ರಶೇಖರ್ ರಾವ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರಿದ್ದಾರೆ. ನಿತೀಶ್‌ ಜನಪ್ರಿಯತೆ ಮತ್ತು ಜನಸಮೂಹ ಕುಸಿದಿದೆ ಎಂದು ಮೋದಿ ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು