ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಬಾರಿಗೆ ಕುಂಭ ಮೇಳದ ಅವಧಿ ಮೊಟಕು

Last Updated 25 ಮಾರ್ಚ್ 2021, 14:21 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹರಿದ್ವಾರದಲ್ಲಿ ನಡೆಯುವ ಕುಂಭ ಮೇಳದ ಅವಧಿಯನ್ನು ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಒಂದು ತಿಂಗಳ ಅವಧಿಗೆ ಮೊಟಕುಗೊಳಿಸಲಾಗಿದೆ.

ಈ ಅತಿ ದೊಡ್ಡ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಭಕ್ತರು ಕೋವಿಡ್‌ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ಏಪ್ರಿಲ್‌ 1 ರಿಂದ 30 ರವರೆಗೆ ಉತ್ತರಾಖಂಡದ ಹರಿದ್ವಾರದ ಗಂಗಾ ನದಿಯ ತೀರದಲ್ಲಿ ಕುಂಭ ಮೇಳ ನಡೆಯಲಿದೆ. ಏಪ್ರಿಲ್‌ 12, 14 ಮತ್ತು 27ರಂದು ಪುಣ್ಯ ಸ್ನಾನಕ್ಕೆ ದಿನಾಂಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

12 ವರ್ಷಗಳಿಗೊಮ್ಮೆ ನಡೆಯುವ ಈ ಧಾರ್ಮಿಕ ಸಮಾವೇಶ ಸಾಮಾನ್ಯವಾಗಿ ಮೂರುವರೆ ತಿಂಗಳವರೆಗೆ ಇರುತ್ತದೆ. 2010ರಂದು ಹರಿದ್ವಾರದಲ್ಲಿ ಕಳೆದ ಬಾರಿಯ ಕುಂಭ ಮೇಳ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT