ಶನಿವಾರ, ಏಪ್ರಿಲ್ 17, 2021
23 °C

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಕುಟುಂಬಕ್ಕೆ ಕೋವಿಡ್-19 ದೃಢ

ಪಿಟಿಐ‌ Updated:

ಅಕ್ಷರ ಗಾತ್ರ : | |

ಮುಂಬೈ: 'ಸ್ಟ್ಯಾಂಡ್-ಅಪ್' ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಆತನ ಕುಟುಂಬಕ್ಕೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಮಂಗಳವಾರ ತಿಳಿಸಿದ್ದಾರೆ.

ಸದ್ಯ ಈ ಹಾಸ್ಯನಟ ಹೋಂ ಕ್ವಾರಂಟೈನ್‌ನಲ್ಲಿದ್ದರೆ, ಅವರ ಪೋಷಕರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿದ್ದವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿರುವುದಾಗಿ ಕಾಮ್ರಾ ತಿಳಿಸಿದ್ದಾರೆ.

'ನನ್ನ ಹೆತ್ತವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ನನಗೂ ಸೋಂಕು ತಗುಲಿರುವುದರಿಂದಾಗಿ ನಾನು ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೊಂದಿಗೆ ಮಾತನಾಡಿದ್ದೇನೆ. ನಾನು ಮತ್ತು ನನ್ನ ಕುಟುಂಬ ಶೀಘ್ರದಲ್ಲೇ ಗುಣಮುಖರಾಗುತ್ತೇವೆ. ದಯವಿಟ್ಟು ಎರಡನೇ ಕೋವಿಡ್ ಅಲೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿ ಮತ್ತು ಜಾಗರೂಕರಾಗಿರಿ' ಎಂದು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಮುಂಬೈನಲ್ಲಿ ಸೋಮವಾರವಷ್ಟೇ 9,857 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 4,62,302ಕ್ಕೆ ಏರಿಕೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು