ಪಟ್ನಾ: ರಾಷ್ಟ್ರಧ್ವಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ‘ದೇಶದ್ರೋಹಿ’ ಎಂದು ಜೆಡಿಯು ಸಂಸದೀಯ ಮಂಡಳಿಯ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

‘ಮೊದಲು ಚಕ್ರವರ್ತಿ ಅಶೋಕನನ್ನು ಅವಮಾನಿಸಲಾಯಿತು. ಈಗ ತ್ರಿವರ್ಣ ಧ್ವಜದ ವಿರುದ್ಧ ಆಂದೋಲನವೇ ನಡೆಯುವಂತೆ ಕಾಣುತ್ತಿದೆ. ಭಾರತವು ಇದನ್ನೆಲ್ಲ ಹೇಗೆ ಸಹಿಸಿಕೊಳ್ಳಬೇಕು?’ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜಕೀಯ ಸಹಾಯಕರೂ ಆಗಿರುವ ಕುಶ್ವಾಹ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿರುವ ಕುಶ್ವಾಹ, ಈಶ್ವರಪ್ಪ ಅವರನ್ನು ‘ದೇಶದ್ರೋಹಿ’ ಎಂದು ಕರೆದಿದ್ದು, ಅವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಎಚ್.ಸಿ. ಮಹದೇವಪ್ಪ

‘... ಭವಿಷ್ಯದಲ್ಲಿ, 100– 200 ಅಥವಾ 500 ವರ್ಷಗಳ ನಂತರ, ಕೇಸರಿ ಧ್ವಜವು ರಾಷ್ಟ್ರಧ್ವಜವಾಗಬಹುದು’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ಹೇಳಿದ್ದರು. ಅಲ್ಲದೇ, ತ್ರಿವರ್ಣ ಧ್ವಜವು ಈಗ ರಾಷ್ಟ್ರಧ್ವಜವಾಗಿದೆ ಮತ್ತು ಅದನ್ನು ಎಲ್ಲರೂ ಗೌರವಿಸಬೇಕು ಎಂದೂ ಹೇಳಿದ್ದರು.

ಇದಕ್ಕೂ ಮುನ್ನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಟಕಕಾರ ದಯಾಪ್ರಕಾಶ್ ಸಿನ್ಹಾ ಅವರು ಅಶೋಕ ಚಕ್ರವರ್ತಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬ್‌ಗೆ ಹೋಲಿಕೆ ಮಾಡಿದ್ದರು. ಇದು ವಿವಾದಕ್ಕೀಡಾಗಿತ್ತು.

ಹಿಜಾಬ್-ಕೇಸರಿ ಶಾಲು ವಿವಾದ ಕಾಂಗ್ರೆಸ್ ಸೃಷ್ಟಿ: ಕೆ.ಎಸ್.ಈಶ್ವರಪ್ಪ

ಈ ಹೇಳಿಕೆ ಖಂಡಿಸಿದ್ದ ಕುಶ್ವಾಹ, ಸಿನ್ಹಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿಯನ್ನು ಕೋರಿದ್ದರು. ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ‘ಬಿಜೆಪಿಯ ಸಾಂಸ್ಕೃತಿಕ ಕೋಶದ ರಾಷ್ಟ್ರೀಯ ಸಂಚಾಲಕರಾಗಿರುವ ದಯಾಪ್ರಕಾಶ್ ಸಿನ್ಹಾ ಅವರು ಅಶೋಕನ ಕುರಿತು ತಪ್ಪು ಮಾಹಿತಿ ಹರಡಿದ್ದಾರೆ’ ಎಂದು ದೂರಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.