ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌: ನಿರ್ಮಾಣ ಹಂತದ ಸೇತುವೆ ಕುಸಿತ, ನಾಲ್ವರ ಸಾವು

Last Updated 10 ಏಪ್ರಿಲ್ 2022, 13:46 IST
ಅಕ್ಷರ ಗಾತ್ರ

ಲೇಹ್‌ (ಪಿಟಿಐ): ಇಲ್ಲಿನ ಡಿಸ್ಕಿಟ್‌ ಗ್ರಾಮದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಲಡಾಖ್‌ನ ನುಬ್ರಾ ಉಪ ವಿಭಾಗ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಬೀಸಿದ ಬಿರುಗಾಳಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಅವಶೇಷಗಳ ಕೆಳಗೆ ಆರು ಮಂದಿ ಕಾರ್ಮಿಕರು ಸಿಲುಕಿದ್ದರು. 12 ಗಂಟೆಗಳ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ನಾಲ್ಕು ಮೃತದೇಹವನ್ನು ಹೊರೆತೆಗೆಯಲಾಯಿತು. ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ರವಾನಿಸಲಾಯಿತು.

ಮೃತರ ಕುಟುಂಬ ಹಾಗೂ ಘಟನೆಯಲ್ಲಿ ಗಾಯಗೊಂಡ ಎಲ್ಲರಿಗೂ ನೆರವು ನೀಡಲಾಗುವುದು ಎಂದು ಲಡಾಖ್‌ನ ಲೆಫ್ಟಿನೆಂಟ್‌ ಗವರ್ನರ್ ಆರ್.ಕೆ.ಮಥುರ್‌ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT