ಬುಧವಾರ, ಅಕ್ಟೋಬರ್ 21, 2020
22 °C

ಅ.16ರಂದು ಲಡಾಖ್‌ ಗಿರಿ ಅಭಿವೃದ್ಧಿ ಸ್ವಾಯತ್ತ ಮಂಡಳಿಯ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಲಡಾಖ್‌ ಗಿರಿ ಅಭಿವೃದ್ಧಿ ಸ್ವಾಯತ್ತ ಮಂಡಳಿಯ (ಎಲ್‌ಎಎಚ್‌ಡಿಸಿ) ಮತದಾನದ ವೇಳಾಪಟ್ಟಿಯನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಶನಿವಾರ ಪ್ರಕಟಿಸಿದ್ದಾರೆ.

ಚುನಾವಣಾ ವಿಭಾಗದ ಕಾರ್ಯದರ್ಶಿ ಸೌಗತ್ ಬಿಸ್ವಾಸ್ ಅಧಿಸೂಚನೆಯನ್ನು ಹೊರಡಿಸಿದ್ದು, ಮಂಡಳಿಯ 30 ಸ್ಥಾನಗಳ ಪೈಕಿ 26 ಸ್ಥಾನಗಳಿಗೆ ಅಕ್ಟೋಬರ್‌ 16ರಂದು ಚುನಾವಣೆ ನಡೆಯಲಿದೆ. ನಾಲ್ಕು ಸ್ಥಾನಗಳಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡುತ್ತದೆ. 

ಕೋವಿಡ್‌ ಬಿಕ್ಕಟ್ಟು ಮತ್ತು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಚುನಾವಣೆಯನ್ನು ಮುಂದೂಡುವಂತೆ ಈ ಹಿಂದೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು