ಸೋಮವಾರ, ಅಕ್ಟೋಬರ್ 26, 2020
27 °C

ಗಡಿ ಸಂಘರ್ಷ: ಭಾರತ–ಚೀನಾ ಸೇನಾ ಕಮಾಂಡರ್‌ಗಳ ನಡುವೆ ಆರನೇ ಸುತ್ತಿನ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿನ ಬಿಕ್ಕಟ್ಟು ಶಮನಕ್ಕೆ ಭಾರತ–ಚೀನಾ ಸೇನಾ ಕಮಾಂಡರ್‌ಗಳ ನಡುವೆ ಸೋಮವಾರ ಆರನೇ ಸುತ್ತಿನ ಮಾತುಕತೆ ನಡೆಯಲಿದೆ. ಸಂಘರ್ಷ ಶಮನಕ್ಕೆ ಎರಡೂ ದೇಶಗಳು ಮಾಡಿಕೊಂಡಿರುವ ಐದು ಅಂಶಗಳ ಸೂತ್ರವನ್ನು ಅನುಷ್ಠಾನಕ್ಕೆ ತರುವ ಕುರಿತು ಮಾತುಕತೆ ವೇಳೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ. 

ವಾಸ್ತವ ನಿಯಂತ್ರಣ ರೇಖೆಯ ಚೀನಾ ಭಾಗದಲ್ಲಿ ಇರುವ ಮೋಲ್ಡೊದಲ್ಲಿ ಸೋಮವಾರ ಬೆಳಗ್ಗೆ 9ಕ್ಕೆ ಮಾತುಕತೆ ಆರಂಭವಾಗುವ ಸಾಧ್ಯತೆ ಇದೆ. ಈ ನಿಯೋಗದಲ್ಲಿ ಇದೇ ಮೊದಲ ಬಾರಿಗೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳೂ ಭಾಗವಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ರಫೇಲ್‌ ಹಾರಾಟ: ಕಳೆದ ಮೂರು ವಾರದಲ್ಲಿ ಚೀನಾ ಸೈನಿಕರು ಗಡಿ ಭಾಗದಲ್ಲಿ ಹಲವು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇಂಥ ಪ್ರಚೋದಿತ ಕ್ರಮಗಳಿಗೆ ಪ್ರತ್ಯುತ್ತರವಾಗಿ ಭಾರತದ ಯುದ್ಧಸನ್ನದ್ಧತೆಯನ್ನು ಪ್ರದರ್ಶಿಸಲು, ಇತ್ತೀಚೆಗಷ್ಟೇ ಭಾರತೀಯ ವಾಯುಪಡೆಗೆ ಸೇರ್ಪಡೆಯಾದ ಅತ್ಯಾಧುನಿಕ ಯುದ್ಧ ವಿಮಾನ ರಫೇಲ್‌ ಅನ್ನು ಲಡಾಖ್‌ ಪ್ರದೇಶದಲ್ಲಿ ಹಾರಾಟ ನಡೆಸಲು ವಾಯುಪಡೆ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು