ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿಲ್ ಕುಮಾರ್ ಲಹೋಟಿ ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ

Last Updated 26 ಡಿಸೆಂಬರ್ 2022, 14:40 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ರೈಲ್ವೆ ಅಧಿಕಾರಿ ಅನಿಲ್ ಕುಮಾರ್ ಲಹೋಟಿ ಅವರು ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಲಿದ್ದಾರೆ.

ಪ್ರಸ್ತುತ ರೈಲ್ವೆ ಮಂಡಳಿ ಸದಸ್ಯರಾಗಿರುವ(ಮೂಲಸೌಕರ್ಯ) ಅವರು ಜ.1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ರೈಲ್ವೆ ಮಂಡಳಿಯ ಹಾಲಿ ಅಧ್ಯಕ್ಷ ಮತ್ತು ಸಿಇಒ ವಿ.ಕೆ.ತ್ರಿಪಾಠಿ ಡಿ.31ರಂದು ನಿವೃತ್ತರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನೇಮಕಾತಿ ಸಮಿತಿಯು ಲಹೋಟಿ ಅವರ ನೇಮಕಕ್ಕೆ ಅನುಮೋದನೆ ನೀಡಿದೆ.ಅವರು ಈ ಮೊದಲು ಭಾರತೀಯ ರೈಲ್ವೆಯ ನಾಗ್ಪುರ, ಜಬಲ್ಪುರ ಮತ್ತು ಭುಸಾವಲ್ ವಿಭಾಗದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT