ಭಾನುವಾರ, ಸೆಪ್ಟೆಂಬರ್ 25, 2022
30 °C

ದಲಿತ ಸೋದರಿಯರ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣದಲ್ಲಿ 6 ಮಂದಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖಿಂಪುರ ಖೇರಿ(ಉತ್ತರ ಪ್ರದೇಶ): ಲಖಿಂಪುರ ಖೇರಿಯಲ್ಲಿ ಬುಧವಾರ ನಡೆದಿದ್ದ ದಲಿತ ಸಮುದಾಯದ ಸಹೋದರಿಯರ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: 

ಪ್ರಮುಖ ಆರೋಪಿ ಛೋಟು ಗೌತಮ್ ಇಬ್ಬರು ಸೋದರಿಯರ ಪೈಕಿ ಒಬ್ಬಾಕೆಯನ್ನು ಮದುವೆಯಾಗಲು ಬಯಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಆಕೆ ನಿರಾಕರಿಸಿದ ಮೇಲೆ ಸ್ನೇಹಿತರೊಂದಿಗೆ ಕೂಡಿ ಇಬ್ಬರೂ  ಬಾಲಕಿಯರನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿ, ಕೊಲೆ ಮಾಡಿ ಮೃತದೇಹವನ್ನು ಮರಕ್ಕೆ ನೇತು ಹಾಕಿದ್ದಾರೆ ಎನ್ನಲಾಗಿದೆ. 

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಜೀವ್ ಸುಮನ್ ಮಾತನಾಡಿ, ‘ಕೃತ್ಯಕ್ಕೂ ಮೊದಲು ಹುಡುಗಿಯರನ್ನು ತನ್ನ ಸ್ನೇಹಿತರಿಗೆ ತೋರಿಸಿದ್ದಾಗಿ ಪ್ರಮುಖ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಹೇಳಿದ್ದಾರೆ. 

ಬುಧವಾರ ಮಧ್ಯಾಹ್ನ ಮನೆಯಿಂದ ಮೋಟಾರ್ ಬೈಕ್ ನಲ್ಲಿ ಬಾಲಕಿಯರನ್ನು ಅಪಹರಿಸಿದ್ದ ಆರೋಪಿಗಳನ್ನು ಸಂತ್ರಸ್ತ ಕುಟುಂಬಸ್ಥರು ಗುರುತಿಸಿದ್ದಾರೆ.

ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಐಪಿಸಿಯ ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ:  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು