ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಖೇರಿ ಪ್ರಕರಣ: ಸರ್ಕಾರಿ ಕಾರ್ಯಕ್ರಮದಿಂದ ದೂರ ಉಳಿದ ಸಚಿವ ಅಜಯ್ ಮಿಶ್ರಾ

Last Updated 20 ಡಿಸೆಂಬರ್ 2021, 12:13 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರು ಕೊನೆಯ ಕ್ಷಣದಲ್ಲಿ ‘ಸಶಸ್ತ್ರ ಸೀಮಾ ಬಲ್‌‘ನ(ಎಸ್‌ಎಸ್‌ಬಿ) 58ನೇ ಸಂಸ್ಥಾಪನಾ ದಿನದ ಸಮಾರಂಭದಿಂದ ದೂರ ಉಳಿದಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೆನಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಆದರೆ, ಅವರ ಸಚಿವ ಸಂಪುಟದ ಸಹೋದ್ಯೋಗಿ ನಿಸಿತ್ ಪ್ರಮಾಣಿಕ್ ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು ಎಂದು ‘ಹಿಂದುಸ್ತಾನ್‌ ಟೈಮ್ಸ್‌‘ ವರದಿ ಮಾಡಿದೆ.

‘ತುರ್ತು ಕೆಲಸದ ನಿಮಿತ್ತ ಟೆನಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ‘ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಅಕ್ಟೋಬರ್‌ 3ರಂದು ಲಖಿಂಪುರ ಖೇರಿ ಪ್ರಕರಣ ನಡೆದಿತ್ತು.ನಾಲ್ವರು ರೈತರು ಸೇರಿ ಎಂಟು ಮಂದಿಯ ಹತ್ಯೆಯಾದ ಲಖಿಂಪುರ–ಖೇರಿ ಪ್ರಕರಣವು ‘ಹತ್ಯೆ ಉದ್ದೇಶದ ಪೂರ್ವಯೋಜಿತ ಷಡ್ಯಂತ್ರ’ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಹೇಳಿದೆ.

ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT