ಶನಿವಾರ, ಡಿಸೆಂಬರ್ 4, 2021
26 °C

ಲಖಿಂಪುರ ಖೇರಿ ಪ್ರಕರಣದ ಆರೋಪಿ ಆಶಿಶ್‌ ಮಿಶ್ರಾಗೆ ಡೆಂಗಿ

ಪಿಟಿಐ Updated:

ಅಕ್ಷರ ಗಾತ್ರ : | |

ಲಖಿಂಪುರ್‌ ಖೇರಿ (ಉತ್ತರ ಪ್ರದೇಶ): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್‌ ಮಿಶ್ರಾ ಅವರಿಗೆ ಡೆಂಗಿ ಜ್ವರ ಬಾಧಿಸಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಕುಮಾರ್ ಮಿಶ್ರಾ ಅವರ ಪುತ್ರರಾಗಿರುವ ಆಶಿಶ್ ಮಿಶ್ರಾ ಅವರನ್ನು ಶನಿವಾರ ಸಂಜೆ ಜಿಲ್ಲಾ ಕಾರಾಗೃಹದ ಆರೋಗ್ಯ ತಪಾಸಣಾ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಲಾಯಿತು ಎಂದು ಹೆಚ್ಚುವರಿ ಎಸ್‌ಪಿ ಅರುಣ್‌ ಕುಮಾರ್ ಸಿಂಗ್ ತಿಳಿಸಿದರು.‌

ಓದಿ: 

ಆಶಿಶ್‌ ಮಿಶ್ರಾ ಮತ್ತು ಇತರ ಮೂವರನ್ನು ಶುಕ್ರವಾರ ಸಂಜೆ ಇನ್ನಷ್ಟು ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. 

ಅಕ್ಟೋಬರ್‌ 3ರಂದು ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರ ಸಹಿತ ಎಂಟು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಸಹಿತ 13 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು