ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಿಶ್ ಮಿಶ್ರಾ ಜಾಮೀನು ರದ್ದು: ಸಚಿವ ಅಜಯ್‌ ಮಿಶ್ರಾ ವಜಾಕ್ಕೆ ಕಾಂಗ್ರೆಸ್ ಆಗ್ರಹ

Last Updated 18 ಏಪ್ರಿಲ್ 2022, 10:37 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸಚಿವರ ವಜಾಕ್ಕೆ ಪಟ್ಟುಹಿಡಿದಿದೆ.

‘ಪ್ರಧಾನಿಯವರು ಯಾವಾಗ ಸಚಿವರನ್ನು ವಜಾಗೊಳಿಸುತ್ತಾರೆ? ರೈತರ ಸಾವಿಗೆ ಕಾರಣರಾದವರನ್ನು ರಕ್ಷಿಸುವುದನ್ನು ಬಿಜೆಪಿ ನಿಲ್ಲಿಸುವುದು ಯಾವಾಗ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್‌ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಇದನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಮಿಶ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸೂಚಿಸಿದೆ. ಜತೆಗೆ, ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಅಲಹಾಬಾದ್‌ ಹೈಕೋರ್ಟ್‌ಗೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT