ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾ. ರಾಕೇಶ್ ಕುಮಾರ್ ಜೈನ್ ನೇಮಕ

Last Updated 17 ನವೆಂಬರ್ 2021, 9:15 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆಯ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ ಬುಧವಾರ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ನೇಮಿಸಿದೆ.

ಮುಖ್ಯ‌ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ರಾಜ್ಯ ಸರ್ಕಾರ ನೀಡಿದ ಐಪಿಎಸ್‌ ಅಧಿಕಾರಿಗಳ ಹೆಸರನ್ನು ಪರಿಗಣಿಸಿ ಅದರಲ್ಲಿ ಮೂವರು ಅಧಿಕಾರಿಗಳನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದ ಭಾಗವಾಗಿ ನೇಮಿಸಿತು. ಈ ಕುರಿತುಶೀಘ್ರದಲ್ಲೇ ವಿವರವಾದ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದರು.

ಎಸ್‌ಐಟಿ ತನಿಖೆ ಮುಗಿಸಿ ಪ್ರಕರಣದ ಸ್ಥಿತಿ-ಗತಿ ಕುರಿತು ವರದಿ ಮತ್ತು ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಮತ್ತೊಮ್ಮೆ ಪ್ರಕರಣದ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣದ ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಿಸಬಹುದೆಂಬ ಸುಪ್ರೀಂ ಕೋರ್ಟ್‌ ಸಲಹೆಗೆ ಇದೇ 15ರಂದು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT