ಬುಧವಾರ, ಮೇ 18, 2022
26 °C

ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದು, ಶರಣಾಗಲು 'ಸುಪ್ರೀಂ' ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಸೋಮವಾರ ರದ್ದುಪಡಿಸಿದೆ.

ಜಾಮೀನು ರದ್ದು ಪಡಿಸುವ ಜೊತೆಗೆ ಒಂದು ವಾರದೊಳಗೆ ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು ತೀರ್ಪು ಪ್ರಕಟಿಸಿದೆ.

ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತರು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು.

ಅಲಹಾಬಾದ್ ಹೈಕೋರ್ಟ್‌ ಆಶಿಶ್‌ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ಗೆ ತಿಳಿಸಿದೆ.

ಕಳೆದ ವರ್ಷದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ‌ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ.

ಇನ್ನಷ್ಟು ಓದು....

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು