ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಅಜಯ್‌ ಮಿಶ್ರಾ ಅವರನ್ನು ವಜಾಮಾಡಿ, ಪುತ್ರನನ್ನು ಬಂಧಿಸಿ: ಟಿಕಾಯತ್ ಆಗ್ರಹ

Last Updated 4 ಅಕ್ಟೋಬರ್ 2021, 6:42 IST
ಅಕ್ಷರ ಗಾತ್ರ

ಲಖಿಂಪುರ್ ಖೇರಿ (ಉತ್ತರ ಪ್ರದೇಶ): ಲಖಿಂಪುರದಲ್ಲಿ ಪ್ರತಿಭಟನೆ ವೇಳೆ ಸಂಭವಿಸಿದ ರೈತರ ಸಾವಿಗೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಅವರ ಪುತ್ರನನ್ನು ಬಂಧಿಸುವಂತೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಸೋಮವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತ ರೈತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ಮತ್ತು ಸಂತ್ರಸ್ತ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.

‘ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಮೃತ ರೈತರ ಶವಸಂಸ್ಕಾರ ಮಾಡುವುದಿಲ್ಲ‘ ಎಂದು ಟಿಕಾಯತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT