ಜೈಪುರ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಸಂಭವಿಸಿದ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸೀತಾಪುರದಲ್ಲಿ ಬಂಧನದಲ್ಲಿದ್ದು, ಅವರನ್ನು ಭೇಟಿ ಮಾಡುವ ಸಲುವಾಗಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಬುಧವಾರ ಸೀತಾಪುರದತ್ತ ಹೊರಟಿದ್ದಾರೆ.
ದೆಹಲಿಗೆ ವಿಮಾನದಲ್ಲಿ ತೆರಳಿ, ಅಲ್ಲಿಂದ ಗಾಜಿಪುರ್ ಮೂಲಕ ಸೀತಾಪುರಕ್ಕೆ ರಸ್ತೆಯಲ್ಲಿ ತೆರಳುವರು. ಅವರು ಲಖಿಂಪುರದಲ್ಲಿ ರೈತರನ್ನು ಸಹ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಲಖಿಂಪುರಕ್ಕೆ ತೆರಳಲು ಮುಂದಾಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಸೋಮವಾರ ಸೀತಾಪುರದಲ್ಲಿ ಬಂಧಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.