ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಖೇರಿ ಪ್ರಕರಣ: ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

Last Updated 6 ಸೆಪ್ಟೆಂಬರ್ 2022, 14:38 IST
ಅಕ್ಷರ ಗಾತ್ರ

ನವದೆಹಲಿ:ಎಂಟು ಮಂದಿ ಸಾವಿಗೀಡಾಗಿದ್ದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಜುಲೈ 26 ರಂದು ಆಶಿಶ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಶಿಶ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ.ಎಂ. ಸುಂದ್ರೇಶ್ ಅವರ ಪೀಠ ನಡೆಸಿತು.

‘ನಾವು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡುತ್ತಿದ್ದೇವೆ’ ಎಂದು ಹೇಳಿದ್ದು, ಸೆಪ್ಟೆಂಬರ್ 26ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT