ಲಖಿಂಪುರ ಖೇರಿ (ಉತ್ತರ ಪ್ರದೇಶ): ಲಖಿಂಪುರ್ ಖೇರಿ ಹಿಂಸಾಚಾರಪ್ರಕರಣದಲ್ಲಿ ಬಂಧಿಯಾಗಿರುವ,ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಶುಕ್ರವಾರ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಲಖಿಂಪುರ್ ಖೇರಿಯ ಮುಖ್ಯ ನ್ಯಾಯಾಧೀಶ ಚಿಂತಾ ರಾಮ್ ಅವರು ಆಶಿಶ್ ಮಿಶ್ರಾ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುತ್ತಿರುವುದು ಇದು ಎರಡನೇ ಬಾರಿ.

ಮಿಶ್ರಾ ಅಲ್ಲದೇ, ಇತರ ಮೂವರು ಆರೋಪಿಗಳಾದ ಅಂಕಿತ್ ದಾಸ್, ಶೇಖರ್ ಭಾರತಿ ಮತ್ತು ಲತೀಫ್ ಎಂಬುವವರನ್ನೂ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಉತ್ತರ ಪ್ರದೇಶದ ಲಖೀಂಪುರ ಖೇರಿ ಎಂಬಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ನಾಲ್ವರು ರೈತರೂ ಸೇರಿ ಎಂಟು ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.