ಶನಿವಾರ, ಮಾರ್ಚ್ 25, 2023
31 °C

ಲಖಿಂಪುರ ಹಿಂಸಾಚಾರ: ಆಶಿಶ್‌ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ನ.15ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖಿಂಪುರ– ಖೇರಿ, ಉತ್ತರ ಪ್ರದೇಶ: ಲಖಿಂಪುರ– ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಾದ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಮತ್ತು ಇತರ ಇಬ್ಬರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯವು ಬುಧವಾರ ನವೆಂಬರ್‌ 15ಕ್ಕೆ ಮುಂದೂಡಿದೆ.

ಅಕ್ಟೋಬರ್‌ 3ರಂದು ಲಖಿಂಪುರ– ಖೇರಿಗೆ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿ ಖಂಡಿಸಿ ಪ್ರತಿಭಟನೆಯೊಂದು ನಡೆಯುವ ವೇಳೆ ಜರುಗಿದ ಹಿಂಸಾಚಾರದಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿ ಎಂಟು ಮಂದಿ ಮೃತಪಟ್ಟಿದ್ದರು.

ಆಶಿಶ್ ಮಿಶ್ರಾ, ಆಶಿಶ್ ಪಾಂಡೆ ಮತ್ತು ಲವಕುಶ್‌ ರಾಣಾ ಸೇರಿದಂತೆ 13 ಮಂದಿ ಬಂಧಿತರಾಗಿದ್ದಾರೆ.  

ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮುಖೇಶ್‌ ಮಿಶ್ರಾ ಅವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್‌ 15ಕ್ಕೆ ಮುಂದೂಡಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ಅರವಿಂದ ತ್ರಿಪಾಠಿ ಹೇಳಿದರು.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು