ಲಖನೌ: ಲಖಿಂಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಇತರ ಹಲವು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆ ಸಂಬಂಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಯಾವ ಪ್ರಕರಣಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂಬ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ಮಾತನಾಡಿ, 'ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಹಲವಾರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಎಫ್‌ಐಆರ್‌ನ ನಕಲು ಇನ್ನೂ ಲಭ್ಯವಾಗಿಲ್ಲದ ಕಾರಣ, ಅದನ್ನು ಯಾವ ವಿಭಾಗದಲ್ಲಿ ನೋಂದಾಯಿಸಲಾಗಿದೆ ಎಂಬುದು ತಿಳಿದಿಲ್ಲ' ಎಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ:ರೈತರ ಸಾವಿಗೆ ಕಾರಣರಾದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ: ವರುಣ್ ಗಾಂಧಿ

ಲಖಿಂಪುರದಲ್ಲಿ ಬೀಡುಬಿಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್, 'ನಾನು ಸ್ಥಳದಲ್ಲಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಎರಡು ಕಡೆಯಿಂದಲೂ ಒಂದೊಂದು ಎಫ್‌ಐಆರ್ ದಾಖಲಿಸಲಾಗಿದೆ. ಇಲ್ಲಿ ಇಂಟರ್ನೆಟ್ ಕಾರ್ಯನಿರ್ವಹಿಸದ ಕಾರಣ ವಿವರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ನಾವು ಈ ಬಗ್ಗೆ ಶೀಘ್ರವೇ ಮಾಧ್ಯಮಗಳಿಗೆ ತಿಳಿಸುತ್ತೇವೆ' ಎಂದಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಭಾನುವಾರ ಮೃತಪಟ್ಟಿದ್ದರು.

ಮೃತಪಟ್ಟವರಲ್ಲಿ ನಾಲ್ವರು ಉತ್ತರ ಪ್ರದೇಶದ ಸಚಿವರನ್ನು ಸ್ವಾಗತಿಸಲು ಬಂದಿದ್ದ ಬಿಜೆಪಿ ಕಾರ್ಯಕರ್ತರು ಬೆಂಗಾವಲು ಪಡೆಯ ಕಾರಿನಲ್ಲಿದ್ದವರು. ಅವರನ್ನು ಥಳಿಸಲಾಗಿದೆ. ಉಳಿದ ನಾಲ್ವರು ರೈತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಕೆಲವು ರೈತ ಮುಖಂಡರು ಆರೋಪಿಸಿರುವಂತೆ ಅವರು ಮತ್ತು ಅವರ ಮಗ ಸ್ಥಳದಲ್ಲಿ ಇರಲಿಲ್ಲ ಮತ್ತು ಅದನ್ನು ಸಾಬೀತುಪಡಿಸಲು ತಮ್ಮ ಬಳಿ ಫೋಟೊ ಮತ್ತು ವಿಡಿಯೊ ಪುರಾವೆಗಳಿವೆ ಎಂದು ಅಜಯ್ ಮಿಶ್ರಾ ತಿಳಿಸಿದ್ದಾರೆ.

ಇನ್ನಷ್ಟು...

ಛತ್ತೀಸ್ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ

ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರ ಕೊಲೆಗೆ ಯತ್ನಿಸಿದ್ದಾರೆ: ಕಾಂಗ್ರೆಸ್

ಬಿಜೆಪಿ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸುಧಾರಿಸಿದೆ: ಯೋಗಿ ಆದಿತ್ಯನಾಥ್

ಲಖಿಂಪುರ–ಖೇರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ, ಪೊಲೀಸರ ವಿರುದ್ಧ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.