ಮಂಗಳವಾರ, ನವೆಂಬರ್ 30, 2021
23 °C

ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಯೋಗೇಂದ್ರ ಯಾದವ್‌ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಖಿಂಪುರ–ಖೇರಿ ಹಿಂಸಾಚಾರದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರೊಬ್ಬರ ಕುಟುಂಬವನ್ನು ಭೇಟಿ ಮಾಡಿದ ಕಾರಣಕ್ಕೆ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್‌ ಅವರನ್ನು ತಿಂಗಳ ಅವಧಿಗೆ ಸಂಯುಕ್ತ ಕಿಸಾನ್‌ ಮೋರ್ಚಾದಿಂದ (ಎಸ್‌ಕೆಎಂ) ಗುರುವಾರ ಅಮಾನತು ಮಾಡಲಾಗಿದೆ.

‘ಎಸ್‌ಕೆೆಎಂನ ಸಾಮಾನ್ಯಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಎಸ್‌ಕೆಎಂನ ಸಭೆಗಳು ಹಾಗೂ ಹೋರಾಟಗಳಲ್ಲಿ ಯಾದವ್‌ ಪಾಲ್ಗೊಳ್ಳುವಂತಿಲ್ಲ’ ಎಂದು ಹಿರಿಯ ರೈತ ಮುಖಂಡರೊಬ್ಬರು ಸಭೆ ನಂತರ ತಿಳಿಸಿದರು.

ಯಾದವ್‌ ಕೂಡ ಈ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡಿದ್ದರು. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಎಸ್‌ಕೆಎಂ ಪ್ರತಿಭಟನೆ ನಡೆಸುತ್ತಿದ್ದು, ಯಾದವ್‌ ಅವರು ಎಸ್‌ಕೆಎಂ ಕೋರ್‌ ಕಮಿಟಿ ಸದಸ್ಯರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು