ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಖೇರಿ ಹಿಂಸಾಚಾರ: ಸಾಕ್ಷಿದಾರರ ರಕ್ಷಣೆಗೆ ‘ಸುಪ್ರೀಂ’ ಸೂಚನೆ

Last Updated 26 ಅಕ್ಟೋಬರ್ 2021, 8:57 IST
ಅಕ್ಷರ ಗಾತ್ರ

ನವದೆಹಲಿ: ರೈತರ ಪ್ರತಿಭಟನೆಯ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಪೀಠ, ಪ್ರಕರಣಕ್ಕೆ ಸಂಬಂಧಿಸಿದ ಇತರ ಸಾಕ್ಷಿಗಳ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿಯಲ್ಲಿ ಸಮೀಪದ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ದಾಖಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿತು.

ಪತ್ರಕರ್ತನ ಕೊಲೆ ಸೇರಿದಂತೆ ಎರಡು ದೂರುಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ತಿಳಿಸಿತು.

ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಉತ್ತರಗಳನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಪೀಠವು, ವಿಚಾರಣೆಯನ್ನು ನವೆಂಬರ್‌ 8ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT