ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಖಿಂಪುರ ಹಿಂಸಾಚಾರ: ಕೇಂದ್ರ ಸಚಿವನ ಪುತ್ರ ಆಶಿಶ್‌ ಮಿಶ್ರಾ ಬಿಡುಗಡೆ

Last Updated 15 ಫೆಬ್ರುವರಿ 2022, 13:51 IST
ಅಕ್ಷರ ಗಾತ್ರ

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಅವರನ್ನು ಜಾಮೀನಿನ ಮೇಲೆ ಜೈಲಿನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಅವರ ಬೆಂಗಾವಲು ಪಡೆಯ ವಾಹನ ಹರಿದು ನಾಲ್ಕು ಮಂದಿ ರೈತರು, ಒಬ್ಬ ಸ್ಥಳೀಯ ಪತ್ರಕರ್ತ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು.

ಈ ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಅವರನ್ನು ಎಸ್‌ಐಟಿ ಬಂಧಿಸಿತ್ತು. ನಾಲ್ಕು ತಿಂಗಳ ಬಳಿಕ ಅಲಹಾಬಾದ್ ಕೋರ್ಟ್‌ ಮಿಶ್ರಾಗೆ ಕಳೆದ ಗುರುವಾರ ಜಾಮೀನು ಮಂಜೂರು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT