ಸೋಮವಾರ, ಆಗಸ್ಟ್ 8, 2022
23 °C

ಭುಜದ ಗಾಯ: ಲಾಲು ಪ್ರಸಾದ್ ಐಸಿಯುಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಮನೆಯ ಮೆಟ್ಟಿಲಿನಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರು ಸೋಮವಾರ ಅಸ್ವಸ್ಥಗೊಂಡಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ.

‘ಭುಜದ ಗಾಯ, ಮೂತ್ರಪಿಂಡದ ಸಮಸ್ಯೆ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಅಸ್ವಸ್ಥಗೊಂಡ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಲಾಲು ಅವರು ಮನೆಯ ಮೆಟ್ಟಿಲಿನಿಂದ ಭಾನುವಾರ ಬಿದ್ದಿದ್ದು, ಅವರ ಭುಜದ ಮೂಳೆ ಮುರಿತಕ್ಕೊಳಗಾಗಿತ್ತು’ ಎಂದೂ ಹೇಳಿವೆ.

ಮೇವು ಹಗರಣದ ಹಲವು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಲಾಲು ಅವರು ಕೆಲವು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಮೂತ್ರಪಿಂಡದ ಕಸಿಗಾಗಿ ಸಿಂಗಪುರಕ್ಕೆ ತೆರಳಲು ಜಾರ್ಖಂಡ್‌ ಹೈಕೋರ್ಟ್‌ನಿಂದ ಅವರು ಅನುಮತಿ ಪಡೆದುಕೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು