ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲು ಪ್ರಸಾದ್ ಯಾದವ್ ಬಿಹಾರ ರಾಜಕೀಯದಲ್ಲಿ ಅಪ್ರಸ್ತುತ: ಸುಶೀಲ್ ಕುಮಾರ್ ಮೋದಿ

Last Updated 15 ಫೆಬ್ರುವರಿ 2022, 12:52 IST
ಅಕ್ಷರ ಗಾತ್ರ

ಪಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯಾಗಿರುವ ಬಗ್ಗೆ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಲಾಲು ಅವರು ಬಿಹಾರ ರಾಜಕೀಯದಲ್ಲಿ ಅಪ್ರಸ್ತುತ ಎಂದೂ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಸುಶೀಲ್, 'ಈ ಪ್ರಕರಣ (ಮೇವು ಹಗರಣ) ಬೆಳಕಿಗೆ ತಂದವರು ನಾವೇ. ಸಿಬಿಐ ತನಿಖೆಗೆ ಆಗ್ರಹಿಸಿ ಪಟ್ನಾ ಹೈಕೋರ್ಟ್‌ಗೆ ಮನವಿ ಮಾಡಿದ್ದೆವು. ಬಿಹಾರವನ್ನು ಲೂಟಿ ಮಾಡಿದವರು ಶಿಕ್ಷೆ ಅನುಭವಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಲಾಲು ಯಾದವ್ ಅವರು ಬಿಹಾರದ ರಾಜಕೀಯದಲ್ಲಿ ಪ್ರಸ್ತುತವಾಗಿ ಉಳಿದಿಲ್ಲ' ಎಂದಿದ್ದಾರೆ.

ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆಯನ್ನು ಜ. 29ರಂದೇ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಫೆ. 15ಕ್ಕೆ ನಿಗದಿ ಮಾಡಿತ್ತು.ಶಿಕ್ಷೆ ಪ್ರಮಾಣವನ್ನು ಫೆ. 18ರಂದು ಪ್ರಕಟಿಸಲಿದೆ.

ಈ ಪ್ರಕರಣದ ಇತರ 36 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿದೆ. ಲಾಲೂ ಅವರ ಶಿಕ್ಷೆಯ ಪ್ರಮಾಣವನ್ನು ಇನ್ನಷ್ಟೇ ತಿಳಿಸಬೇಕಾಗಿದೆ ಎಂದು ಡೊರಂಡ ಖಜಾನೆ ಪ್ರಕರಣದ ಪ್ರತಿವಾದಿ ವಕೀಲ ಸಂಜಯ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT