ಸೋಮವಾರ, ಅಕ್ಟೋಬರ್ 3, 2022
24 °C

ಮೋದಿಯನ್ನು ಅಧಿಕಾರದಿಂದ ತೊಲಗಿಸಬೇಕು: ಲಾಲು ಪ್ರಸಾದ್ ಯಾದವ್

ಪಿಟಿಐ Updated:

ಅಕ್ಷರ ಗಾತ್ರ : | |

ಪಟ್ನಾ: ಕೇಂದ್ರದ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದೆ ಎಂದು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಜತೆಗೆ, 2024ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಿ ಅಧಿಕಾರದಿಂದ ತೊಲಗಿಸಬೇಕು ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಜೆಡಿ(ಯು), ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ), ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಮಹಾ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಲಾಲು ಬಹಿರಂಗ ಹೇಳಿಕೆ ನೀಡಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದಲ್ಲಿರುವ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು. ಮೋದಿಯನ್ನು ಅಧಿಕಾರದಿಂದ ತೊಲಗಿಸಬೇಕು’ ಎಂದು ಹೇಳಿದ್ದಾರೆ.

ಮಹಾ ಮೈತ್ರಿ ಸರ್ಕಾರದ ಬಗ್ಗೆ ಬಿಜೆಪಿ ನಾಯಕ ಸುಶೀಲ್ ಮೋದಿ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಲಾಲು, ಸುಶೀಲ್ ಮೋದಿ ಒಬ್ಬ ಸುಳ್ಳುಗಾರ. ಅವರು ಮಾಡಿರುವ ಆರೋಪಗಳೆಲ್ಲ ಸುಳ್ಳು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು