ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಪುತ್ರಿ, ಸಂಸದೆ ಮೀಸಾ ಭಾರತಿ ಶನಿವಾರ ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.
ಇದೇ ಪ್ರಕರಣದಲ್ಲಿ ಮೀಸಾ ಭಾರತಿ ಸಹೋದರ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಶನಿವಾರ ಸಿಬಿಐ ಎದುರು ಹಾಜರಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಆರ್‌ಜೆಡಿ ವರಿಷ್ಠರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಶೋಧ ನಡೆಸಿತ್ತು. ಬಳಿಕ ದಾಖಲೆ ಇಲ್ಲದ ₹ 1 ಕೋಟಿ ನಗದು ಜಪ್ತಿ ಮಾಡಿದ್ದು,
₹ 600 ಕೋಟಿ ಅಕ್ರಮ ವಹಿವಾಟು ನಡೆಸಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಹೇಳಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.