ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಜೆಡಿ ಅಧ್ಯಕ್ಷ ಸ್ಥಾನ ತ್ಯಜಿಸಲ್ಲವೆಂದ ಲಾಲು ಪ್ರಸಾದ್ ಯಾದವ್

Last Updated 5 ಫೆಬ್ರುವರಿ 2022, 4:45 IST
ಅಕ್ಷರ ಗಾತ್ರ

ನವದೆಹಲಿ: ಮಗ ತೇಜಸ್ವಿ ಯಾದವ್‌ಗಾಗಿ ಲಾಲು ಪ್ರಸಾದ್ ಯಾದವ್ ಪಕ್ಷದ ಅಧ್ಯಕ್ಷ ಸ್ಥಾನ ತ್ಯಜಿಸಲಿದ್ದಾರೆ ಎಂಬ ವರದಿಗಳನ್ನು ಅವರು ಅಲ್ಲಗಳೆದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಲಾಲು, ವದಂತಿಗಳನ್ನು ಹರಡುವವರು ಮೂರ್ಖರು ಮತ್ತು ಅವರು ಮಾಧ್ಯಮಗಳಿಗೆ ಸುಳ್ಳು ಸುದ್ದಿ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

‘ವರದಿಗಳಲ್ಲಿ ಸತ್ಯಾಂಶವಿಲ್ಲ. ನಾವು ಆ ರೀತಿಯ ಯೋಚನೆ ಮಾಡಿಲ್ಲ. ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದು ವದಂತಿಗಳಷ್ಟೇ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಫೆಬ್ರುವರಿ 10ರಂದು ನಡೆಯಲಿರುವ ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲಾಲು ಹುದ್ದೆ ತ್ಯಜಿಸಲಿದ್ದಾರೆ. ಜವಾಬ್ದಾರಿಯನ್ನು ಮಗ ತೇಜಸ್ವಿ ಯಾದವ್‌ಗೆ ವಹಿಸಲಿದ್ದಾರೆ ಎಂದು ಇತ್ತೀಚೆಗೆ ವದಂತಿ ಹಬ್ಬಿತ್ತು.

ತೇಜಸ್ವಿ ಯಾದವ್ ಸದ್ಯ ಬಿಹಾರದ ಪ್ರತಿಪಕ್ಷ ನಾಯಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT