ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಕ್ಕಾಗಿ ಭೂಮಿ ಹಗರಣ– ಸದ್ಯ ತೇಜಸ್ವಿ ಬಂಧನವಿಲ್ಲ: ಸಿಬಿಐ

Last Updated 16 ಮಾರ್ಚ್ 2023, 10:54 IST
ಅಕ್ಷರ ಗಾತ್ರ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಆರೋಪಕ್ಕೆ ಸಂಬಂಧಿಸಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರನ್ನು ಸದ್ಯ ಬಂಧಿಸುವುದಿಲ್ಲ ಎಂದು ಸಿಬಿಐ ದೆಹಲಿ ಹೈಕೋರ್ಟ್‌ಗೆ ಗುರುವಾರ ಹೇಳಿತು. ವಿಚಾರಣೆಗಾಗಿ ಮಾರ್ಚ್‌ 25ರಂದು ಸಿಬಿಐ ಎದುರು ಹಾಜರಾಗುವುದಾಗಿ ತೇಜಸ್ವಿ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಹೀಗೆ ಹೇಳಿದೆ.

ಈ ಕುರಿತು ಸಿಬಿಐ ಪರ ವಕೀಲರ ಹೇಳಿಕೆಯನ್ನು ನ್ಯಾಯಮೂರ್ತಿ ದಿನೇಶ್‌ ಕುಮಾರ್‌ ಶರ್ಮಾ ಅವರು ದಾಖಲಿಸಿಕೊಂಡರು. ಬಳಿಕ, ತೇಜಸ್ವಿ ಮಾರ್ಚ್‌ 25ರಂದು ಬೆಳಿಗ್ಗೆ 10.30ಕ್ಕೆ ದೆಹಲಿಯ ಸಿಬಿಐ ಮುಖ್ಯಕಚೇರಿಯಲ್ಲಿ ಹಾಜರಿರುತ್ತಾರೆ ಎಂದು ಅವರ ಪರ ವಕೀಲ ಮಣಿಂದರ್‌ ಸಿಂಗ್ ಕೋರ್ಟ್‌ಗೆ ಹೇಳಿಕೆ ಸಲ್ಲಿಸಿದರು.

ಬಿಹಾರ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ತನಿಖಾಧಿಕಾರಿಗಳ ಎದುರು ಹಾಜರಾಗಲು ಕಾಲಾವಕಾಶ ನೀಡಬೇಕೆಂದು ಕೋರಿ ತೇಜಸ್ವಿ ಅವರು ಪತ್ರಗಳ ಮೂಲಕ ಸಿಬಿಐಗೆ ಮನವಿ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಇಬ್ಬರ ಪರ ವಕೀಲರು ಹೇಳಿಕೆ ಸಲ್ಲಿಸಿದ ಬಳಿಕ, ಸಿಬಿಐ ತಮಗೆ ನೀಡಿದ್ದ ಸಮನ್ಸ್‌ ರದ್ದುಪಡಿಸುವಂತೆ ಕೋರಿ ತೇಜಸ್ವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು 2004ರಿಂದ 2009ರ ವರೆಗಿನ ಅವಧಿಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ವೇಳೆ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದ ಮೊಕದ್ದಮೆ ಇದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT