ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಆರೋಪಕ್ಕೆ ಸಂಬಂಧಿಸಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಿಬಿಐ ಅಧಿಕಾರಿಗಳ ಎದುರು ಶನಿವಾರ ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗಾಗಿ ಮಾರ್ಚ್ 25ರಂದು ಸಿಬಿಐ ಎದುರು ಹಾಜರಾಗುವುದಾಗಿ ತೇಜಸ್ವಿ ಒಪ್ಪಿಗೆ ನೀಡಿದ್ದರು ಎಂದು ಸಿಬಿಐ ಹೇಳಿತ್ತು.
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು 2004ರಿಂದ 2009ರ ವರೆಗಿನ ಅವಧಿಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ವೇಳೆ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದ ಮೊಕದ್ದಮೆ ಇದಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.