ಸೋಮವಾರ, ಸೆಪ್ಟೆಂಬರ್ 27, 2021
22 °C

ಹಿಮಾಚಲ ಪ್ರದೇಶ: ಭೂಕುಸಿತ, ಮಣ್ಣಿನಡಿ ಸಿಲುಕಿದವರಿಗಾಗಿ ಹುಡುಕಾಟ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್‌ ಸಮೀಪ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ಮೂವರು ವ್ಯಕ್ತಿಗಳು ಮಣ್ಣಿನಡಿ ಸಿಲುಕಿದ್ದಾರೆ.

ಈ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.  ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ.

ಸೊಲಾನ್ ಜಿಲ್ಲೆಯ ಕಸೌಲಿ ಉಪ ವಲಯದ ಪರ್ವಾನೂ ಪಟ್ಟಣದ ಸೆಕ್ಟರ್ 3 ನಲ್ಲಿರುವ ಹೋಟೆಲ್‌ ಸಮೀಪದಲ್ಲಿ ಮುಂಜಾನೆ 2.30ರ ವೇಳೆಯಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು