ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇ‍ಪಾಳ: ಭೂಕುಸಿತ, ಪ್ರವಾಹದಿಂದ 18 ಮಂದಿ ಸಾವು

Last Updated 20 ಜೂನ್ 2021, 13:37 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದಲ್ಲಿ ಕಳೆದ ವಾರವಿಡೀ ಸುರಿದ ಭಾರಿ ಮಳೆಯಿಂದ ಉಂಟಾದ ಭೂಕುಸಿತ ಹಾಗೂ ಪ್ರವಾಹದಲ್ಲಿ ಕನಿಷ್ಠ 18 ಮಂದಿ ಸಾವಿಗೀಡಾಗಿದ್ದು, 21 ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ.

ಕಠ್ಮಂಡುವಿನಿಂದ ಪೂರ್ವಕ್ಕೆ 30 ಕಿ.ಮೀ ದೂರದಲ್ಲಿರುವ ಸಿಂಧುಪಾಲ್ ಚೌಕ್ ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಲ್ಲಿ ನಾಲ್ವರು, ದೋತಿಯಲ್ಲಿ ಮೂವರು, ಸಪ್ತಾರಿ, ಕಾವ್ರೆ, ಗೂರ್ಖಾ, ಕಾಸ್ಕಿ, ಅರ್ಘಾಚಿ, ಪಾಲ್ಪಾ, ಪ್ಯುಥಾನ್, ಜುಮ್ಲಾ, ಕಾಳಿಕೋಟ್, ಬಜಾಂಗ್ ಮತ್ತು ಬಾಜುರಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಪತ್ತೆ: ಸಿಂಧುಪಾಲ್ ಚೌಕ್ ಜಿಲ್ಲೆಯ ಮೆಲಮ್ಚಿ ಪ್ರದೇಶದಲ್ಲಿ 20 ಜನರು ಹಾಗೂ ಬಾಜುರಾ ಪ್ರದೇಶದಿಂದ ಒಬ್ಬರು ನಾಪತ್ತೆಯಾಗಿದ್ದಾರೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT