ಮಂಗಳವಾರ, ನವೆಂಬರ್ 29, 2022
29 °C

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: ವಾಹನಗಳಿಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೇಜ್‌ಪುರ(ಅರುಣಾಚಲ ಪ್ರದೇಶ): ಅರುಣಾಚಲ ಪ್ರದೇಶದಲ್ಲಿ ಭಾರಿ ವರ್ಷಧಾರೆ ಪರಿಣಾಮ ಭೂಕುಸಿತ ಉಂಟಾಗಿದ್ದು, ವಾಹನಗಳಿಗೆ ಹಾನಿಯಾಗಿದೆ.

ವರ್ಷಧಾರೆ ಬೋರ್ಗರೆಯುತ್ತಿರುವ ಪರಿಣಾಮ ಭಾರೀ ಭೂ ಕುಸಿತಕ್ಕೂ ಕಾರಣವಾಗಿದೆ. ಪಶ್ಚಿಮ ಕಮೆಂಗ್ ಜಿಲ್ಲೆಯ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳಿಗೆ ಹಾನಿಯಾಗಿದೆ. ಇನ್ನೂ ಕೆಲವು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.

ಇಲದಲಿನ ತಿಪ್ಪಿ ಜಲಪಾತ ಪ್ರದೇಶದಲ್ಲಿ ಅಧಿಕ ನೀರಿನಿಂದಾಗಿ ಭೂಕುಸಿತ ಉಂಟಾಗಿದೆ. ಇದರ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಳೆ ನಿಲ್ಲದ ಕಾರಣ ಭೂಕುಸಿತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಆ ಮಾರ್ಗವಾಗಿ ಸಂಚರಿಸದಂತೆ ಸರ್ಕಾರ ಎಚ್ಚರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು