ಭಾನುವಾರ, ಮೇ 29, 2022
31 °C

ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ: ಮಹಾರಾಷ್ಟ್ರ ಆರೋಗ್ಯ ಸಚಿವ ತೋಪೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಲ್ನಾ, ಮಹಾರಾಷ್ಟ್ರ: ಮುಂಬೈನ ಆಸ್ಪತ್ರೆಗೆ ದಾಖಲಾಗಿರುವ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್‌ ತೋಪೆ ಭಾನುವಾರ ಹೇಳಿದ್ದಾರೆ. 

‘ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸುಧಾರಿಸುತ್ತಿದೆ. ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ವೈದ್ಯರು ನನಗೆ ಮಂಗೇಶ್ಕರ್‌ ಅವರ ಆರೋಗ್ಯದ ಮಾಹಿತಿ ನೀಡಿದ್ದಾರೆ. ಗಾಯಕಿಯ ಆರೋಗ್ಯದ ಕುರಿತು ಕೇಳುವ ಎಲ್ಲರಿಗೂ ಆಸ್ಪತ್ರೆಯ ವಕ್ತಾರರೊಬ್ಬರು ಮಾಹಿತಿ ನೀಡಬೇಕು ಎಂದು ಸೂಚಿಸಿದ್ದೇನೆ’ ಎಂದು ತೋಪೆ ಅವರು ಜಲ್ನಾದಲ್ಲಿ ಸುದ್ದಿಗಾರರಿಗೆ ಹೇಳಿದರು. 

ಈ ಬಗ್ಗೆ ಅವರ ಕುಟುಂಬ ಸದಸ್ಯರ ಬಳಿಯೂ ಚರ್ಚಿಸಿದ್ದೇನೆ ಎಂದೂ ತೋಪೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು