ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿನ್ ರಾವತ್ ಸಹೋದರ ವಿಜಯ್ ರಾವತ್ ಬಿಜೆಪಿಗೆ ಸೇರ್ಪಡೆ

Last Updated 19 ಜನವರಿ 2022, 14:58 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ಸಹೋದರ ವಿಜಯ್ ರಾವತ್ ಅವರು ಬುಧವಾರ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.

ಉತ್ತರಾಖಂಡ್‌ನಲ್ಲಿ ಬಿಜೆಪಿ ಅವರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಕರ್ನಲ್ ಆಗಿ ಸೇನೆಯಿಂದ ನಿವೃತ್ತರಾಗಿರುವ ವಿಜಯ್ ರಾವತ್ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಮಾಜಿ ಸೇನಾಧಿಕಾರಿಯೂ ಆಗಿರುವ ತಮ್ಮ ತಂದೆ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು ಎಂದಿರುವ ರಾವತ್, ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ವಿಶಿಷ್ಟವಾದ ದೃಷ್ಟಿಕೋನ ಮತ್ತು ಮನಸ್ಥಿತಿಯನ್ನು ಹೊಂದಿರುವ ವ್ಯಕ್ತಿ ಎಂದು ಕೊಂಡಾಡಿದ್ದಾರೆ.

ಅವರು ಚೌಕಟ್ಟಿನ ಹೊರಗೆ ಯೋಚಿಸುತ್ತಾರೆ. ಅವರ ಎಲ್ಲಾ ಪ್ರಯತ್ನಗಳು ದೇಶವನ್ನು ಸುಧಾರಣೆಯ ಕಡೆಗೆ ಕೊಂಡೊಯ್ಯುತ್ತವೆ ಎಂದು ರಾವತ್ ಹೇಳಿದರು.

ವಿಜಯ್ ರಾವತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಧಾಮಿ, ದಿವಂಗತ ಸಿಡಿಎಸ್ ಬಿಪಿನ್ ರಾವತ್ ಅವರು ನಿವೃತ್ತಿಯ ನಂತರ ರಾಜ್ಯಕ್ಕಾಗಿ ಕೆಲಸ ಮಾಡಲು ಬಯಸಿದ್ದರು. ಅವರ ಕಿರಿಯ ಸಹೋದರ ಅವರ ಆಶಯವನ್ನು ಪೂರೈಸುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT