ಮಂಗಳವಾರ, ಮಾರ್ಚ್ 21, 2023
20 °C

ದೆಹಲಿ: ಕೇಂದ್ರದ ಮಾಜಿ ಸಚಿವ ಪಿ.ಆರ್. ಕುಮಾರಮಂಗಲಂ ಪತ್ನಿಯ ಹತ್ಯೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಮಾಜಿ ಸಚಿವ, ದಿವಂಗತ ಪಿ.ಆರ್. ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ (67) ಅವರನ್ನು ಮಂಗಳವಾರ ರಾತ್ರಿ ದೆಹಲಿಯ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆಯಲ್ಲಿ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: 

ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ವಸಂತ್ ವಿಹಾರದಲ್ಲಿ ಕಿಟ್ಟಿ ಕುಮಾರಮಂಗಲಂ ಒಬ್ಬಂಟಿಯಾಗಿದ್ದಾಗ ಅವರಿಗೆ ಕೆಲಸ ಮಾಡಿಕೊಡುತ್ತಿದ್ದ ಧೋಬಿಯು ದರೋಡೆ ಮಾಡುವ ಉದ್ದೇಶದಿಂದ ಮತ್ತಿಬ್ಬರ ಸಹಾಯದಿಂದ ಮನೆಯೊಳಗೆ ನುಗ್ಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಕಿಟ್ಟಿ ಕುಮಾರಮಂಗಲಂ ಅವರ ಸಹಾಯಕಿಯನ್ನು ಕೋಣೆಯೊಳಗೆ ಕಟ್ಟಿ ಹಾಕಿದ ಬಳಿಕ ಆಕೆಯ ಮೇಲೆ ಹಲ್ಲೆ ಮಾಡಿ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 11ರ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಬಳಿಕ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತರೆ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು