ಶನಿವಾರ, ಅಕ್ಟೋಬರ್ 23, 2021
22 °C

ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡಿದ ಆರೋಪ: ಜಾವೇದ್‌ ಅಖ್ತರ್‌ಗೆ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ‘ಸುಳ್ಳು ಹಾಗೂ ಮಾನಹಾನಿಕರ’ ಟೀಕೆ ಮಾಡಿದ ಆರೋಪದ ಮೇಲೆ ನಗರದ ವಕೀಲರೊಬ್ಬರು ಗೀತ ರಚನೆಕಾರ ಜಾವೇದ್‌ ಅಖ್ತರ್‌ ಅವರಿಗೆ ಬುಧವಾರ ನೋಟಿಸ್‌ವೊಂದನ್ನು ಕಳುಹಿಸಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಜಾವೇದ್‌ ಅವರು ಆರ್‌ಎಸ್‌ಎಸ್‌ ಅನ್ನು ಟೀಕಿಸಿದ್ದರು. ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ್ದರು.    

ಅಖ್ತರ್‌ ಅವರು ಬೇಷರತ್ತಾಗಿ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇದರಲ್ಲಿ ಅವರು ವಿಫಲರಾದರೆ ಅಖ್ತರ್‌ ವಿರುದ್ಧ ₹ 100 ಕೋಟಿ ಮಾನನಷ್ಟದ ಅಪರಾಧ ಪ್ರಕರಣವನ್ನು ಹೂಡುವುದಾಗಿ ವಕೀಲ ಸಂತೋಷ್‌ ದುಬೆ ಹೇಳಿದ್ದಾರೆ.

ಅಖ್ತರ್‌ ಅವರು ನೋಟಿಸ್‌ ಸ್ವೀಕರಿಸಿದ ಏಳು ದಿನಗಳ ಒಳಗೆ ತಮ್ಮ ಎಲ್ಲಾ ಹೇಳಿಕೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. 

ಇತ್ತೀಚಿನ ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಜಾವೇದ್‌ ಅಖ್ತರ್‌ (76) ತಾಲಿಬಾನ್‌ ಮತ್ತು ಆರ್‌ಎಸ್‌ಎಸ್‌ ನಡುವೆ ಸಾಮ್ಯತೆ ಇದೆ ಎಂದಿದ್ದರು.

ಅವರ ಈ ಹೇಳಿಕೆಗಳನ್ನು ಉಲ್ಲೇಖಿಸಿರುವ ವಕೀಲ ಸಂತೋಷ್‌, ಅಖ್ತರ್‌ ಅವರು ಐಪಿಸಿ ಸೆಕ್ಷನ್‌ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.