ಶನಿವಾರ, ಡಿಸೆಂಬರ್ 4, 2021
26 °C

ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಶಹಜಾನ್‌ಪುರ್: ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್‌ಪುರ್‌ನಲ್ಲಿ ನಡೆದಿರುವುದು ವರದಿಯಾಗಿದೆ.

ಸೋಮವಾರ ಇಲ್ಲಿನ ಸಿವಿಲ್ ಕೋರ್ಟ್‌ನ ಮೂರನೇ ಮಹಡಿಯಲ್ಲಿ ವಕೀಲ ಭೂಪೆಂದ್ರ ಪ್ರತಾಪ್ ಸಿಂಗ್ ಎನ್ನುವರನ್ನು ದುಷ್ಕರ್ಮಿಗಳು ನಾಡ ಪಿಸ್ತೂಲ್‌ನಿಂದ ಗುಂಡಿಟ್ಟು ಕೊಲೆ ಮಾಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ದ್ವೇಷ ಸಾಧನೆಗೆ ಈ ಕೊಲೆ ನಡೆದಿದೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ಸ್ಥಳದಿಂದ ನಾಡ ಪಿಸ್ತೂಲ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ರೋಹಿಣಿಯ ನ್ಯಾಯಾಲಯದಲ್ಲಿಯೇ ದುಷ್ಕರ್ಮಿಗಳು ಗ್ಯಾಂಗ್‌ಸ್ಟರ್ ಜಿತೇಂದ್ರ ಗೋಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಕೋರ್ಟ್‌ ಹಾಲ್‌ನಲ್ಲೇ ಇಂತಹ ಘಟನೆಗಳು ನಡೆದಿದ್ದಕ್ಕೆ ದೆಹಲಿ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕಾಶ್ಮೀರದಲ್ಲಿ ಸುರಿದ ಅಮಾಯಕರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ: ಮನೋಜ್‌ ಸಿನ್ಹಾ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು