ಸೋಮವಾರ, ಜನವರಿ 17, 2022
19 °C

ಓಮೈಕ್ರಾನ್ ಭೀತಿ | ವಿಧಾನಸಭಾ ಚುನಾವಣೆ ಮುಂದೂಡಿ: ಸಿಇಸಿಗೆ ವಕೀಲರ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನ ಭೀತಿ ದೂರವಾಗುವವರೆಗೆ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಆಗ್ರಹಿಸಿ ಹಿರಿಯ ವಕೀಲ ಆದೀಶ್ ಸಿ. ಅಗರ್‌ವಾಲ್ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಸೋಮವಾರ ಪತ್ರ ಬರೆದಿದ್ದಾರೆ.

ಕೋವಿಡ್‌ ಎರಡನೇ ಅಲೆಯು ದೇಶ ವಿಭಜನೆಯ ನಂತರ ಕಂಡ ಅತ್ಯಂತ ಭೀಕರ ದುರಂತವಾಗಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಪುದುಚೇರಿಯಲ್ಲಿ ನಡೆದ ಚುನಾವಣೆಯ ವೇಳೆ ಜನರು ತೋರಿದ್ದ ನಿರ್ಲಕ್ಷ್ಯದಿಂದಾಗಿ ಇದು ತೀವ್ರ ಸ್ವರೂಪ ಪಡೆದುಕೊಂಡಿತ್ತು ಎಂದು ಅವರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ದೇಶದ ಕೆಲವು ರಾಜ್ಯಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಇದೆ. ಇತರ ದೇಶಗಳಲ್ಲೂ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೇರಿದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು