ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ವಾಡ್‘ ರಾಷ್ಟ್ರಗಳ ಸಭೆಯಲ್ಲಿ ಚೀನಾ ಸವಾಲು ಕುರಿತ ಚರ್ಚೆ

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್
Last Updated 13 ಮಾರ್ಚ್ 2021, 8:04 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್‌ ದೇಶಗಳನ್ನೊಳಗೊಂಡ ‘ಕ್ವಾಡ್‘ ರಾಷ್ಟ್ರಗಳ ಮುಖ್ಯಸ್ಥರ ಸಭೆಯಲ್ಲಿ, ಚೀನಾದಿಂದ ಎದುರಾಗಿರುವ ಸವಾಲುಗಳ ಬಗ್ಗೆ ಚರ್ಚೆ ನಡೆದಿದೆ.

ಕೋವಿಡ್‌ 19 ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನಿನ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಿದ್ದರು. ಇದನ್ನು ಐತಿಹಾಸಿಕ ವರ್ಚುವಲ್ ‘ಕ್ವಾಡ್‘ ಶೃಂಗಸಭೆ ಎಂದು ಬಣ್ಣಿಸಲಾಗಿದೆ.

ಸಭೆಯ ನಂತರ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್, ‘ಸಭೆಯಲ್ಲಿ ದಕ್ಷಿಣ ಮತ್ತು ಪೂರ್ವ ಚೀನಾ ಸಮುದ್ರ ಮಾರ್ಗಗಳಲ್ಲಿ ಸಂಚಾರ, ಉತ್ತರ ಕೊರಿಯಾದ ಪರಮಾಣು ಸಮಸ್ಯೆ ಮತ್ತು ಮ್ಯಾನ್ಮಾರ್‌ನಲ್ಲಿ ನಡೆದ ಸೇನಾ ದಂಗೆ ಮತ್ತು ಹಿಂಸಾಚಾರ ಸೇರಿದಂತೆ ಪ್ರಮುಖ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು’ ಎಂದರು.

‘ಪ್ರಸ್ತುತ ಎದುರಿಸುತ್ತಿರುವ ಕಠಿಣ ಪರಿಸ್ಥಿತಿಯ ಹೊರತಾಗಿಯೂ ಭವಿಷ್ಯದ ಆಶಾವಾದದೊಂದಿಗೆ ಒಂದಷ್ಟು ಮಹತ್ವದ ಮಾತುಕತೆಗಳು ನಡೆದವು‘ ಎಂದು ಸುಲ್ಲಿವಾನ್ ಹೇಳಿದರು.

‘ನಾಲ್ಕು ರಾಷ್ಟ್ರಗಳ ನಾಯಕರು ಚೀನಾ ಒಡ್ಡುತ್ತಿರುವ ಸವಾಲುಗಳ ಕುರಿತು ಚರ್ಚಿಸಿದರು. ಚೀನಾದ ಬಗ್ಗೆ ಯಾರಲ್ಲೂ ಯಾವುದೇ ರೀತಿಯ ಭ್ರಮೆ ಇಲ್ಲ ಎಂಬುದು ಸಭೆಯಲ್ಲಿ ಸ್ಪಷ್ಟವಾಗಿತ್ತು‘ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT