ಶನಿವಾರ, ಡಿಸೆಂಬರ್ 3, 2022
20 °C

ಪ್ರಾದೇಶಿಕ ಭಾಷೆಯಲ್ಲಿ ಕಲಿಯುವುದರಿಂದ ಎಲ್ಲರಿಗೂ ಶಿಕ್ಷಣ: ರಾಷ್ಟ್ರಪತಿ ಮುರ್ಮು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಪ್ರಾದೇಶಿಕ ಹಾಗೂ ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ಎಲ್ಲರಿಗೂ ಶಿಕ್ಷಣ ದೊರೆಯುತ್ತದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಶುಕ್ರವಾರ ಹೇಳಿದ್ದಾರೆ.

ಎರಡು ದಿನಗಳ ಒಡಿಶಾ ಪ್ರವಾಸದಲ್ಲಿರುವ ಮುರ್ಮು ಅವರು ಕೇಂದ್ರ ಶಿಕ್ಷಣ ಸಚಿವಾಲಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಶಿಕ್ಷಣವು ಸಬಲೀಕರಣದ ಸಾಧನವಾಗಿದೆ ಮತ್ತು ಮಾತೃಭಾಷೆಯ ಬಳಕೆಯು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.

ಮಾತೃಭಾಷೆಯಲ್ಲಿ ಕಲಿಯುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಕೌಶಲ ವೃದ್ಧಿಯಾಗುತ್ತದೆ. ಅಲ್ಲದೇ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗುತ್ತದೆ. ದೇಶದ ಪ್ರತಿ ಮಗುವಿಗೂ ತಾರತಮ್ಯವಿಲ್ಲದೇ ಶಿಕ್ಷಣ ದೊರೆಯುವಂತಾಗಬೇಕು. ಈ ಕಾರಣದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದರು.

ಸ್ಥಳೀಯ ಭಾಷೆಗಳಲ್ಲಿ ತಾಂತ್ರಿಕ ಪುಸ್ತಕ ದೊರೆಯುವಂತೆ ಮಾಡಿದ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್‌ (ಎಐಸಿಇಟಿ) ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮಕ್ಕೂ ಮುನ್ನ ತಾವು ಓದಿದ ಅಲ್ಮಾ ಮ್ಯಾಟರ್‌ ಗವರ್ನಮೆಂಟ್ ಗರ್ಲ್ಸ್‌ ಹೈಸ್ಕೂಲ್‌, ತಾವು ವಾಸವಿದ್ದ ಕುಂತಲಾ ಕುಮಾರಿ ಸಾಬತ್‌ ಆದಿವಾಸಿ ಗರ್ಲ್ಸ್‌ ವಸತಿ ಗೃಹಕ್ಕೆ ಭೇಟಿ ನೀಡಿ ತಮ್ಮ ಹಿಂದಿನ ದಿನಗಳನ್ನು ಸ್ಮರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು