ಡಿ.8ರ ‘ಭಾರತ್ ಬಂದ್‘ಗೆ ಎಡ ಪಕ್ಷಗಳ ಬೆಂಬಲ

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ವಿವಿಧ ರೈತಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ಎಡ ಪಕ್ಷಗಳು, ಇದೇ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್‘ಗೂ ತಮ್ಮ ಬೆಂಬಲವನ್ನು ವಿಸ್ತರಿಸಿವೆ.
ರಾಷ್ಟ್ರವ್ಯಾಪಿ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಪಕ್ಷಗಳು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.
ಇದನ್ನೂ ಓದಿ: ಡಿ. 8ಕ್ಕೆ ಭಾರತ ಬಂದ್ಗೆ ರೈತರ ಕರೆ: ಮತ್ತೆ ಮಾತುಕತೆ
‘ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೇಶದಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಎಡಪಕ್ಷಗಳು ಬೆಂಬಲ ವ್ಯಕ್ತಪಡಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿವೆ. ಡಿ.8ರಂದು ಕರೆ ನೀಡಿರುವ ಭಾರತ್ ಬಂದ್‌ಗೂ ತಮ್ಮ ಬೆಂಬಲವನ್ನು ವಿಸ್ತಿರಿಸಿವೆ‘ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ ವಿರೋಧಿಸುವ ಕೆನಡಾಕ್ಕೆ ಭಾರತದ ರೈತರ ಬಗ್ಗೆ ಕಾಳಜಿ: ಬಿಜೆಪಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.