ಬುಧವಾರ, ಆಗಸ್ಟ್ 17, 2022
29 °C

ಲೇಹ್‌–ಜಮ್ಮು ನಡುವೆ ವಿಮಾನ ಸಂಚಾರ ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಕೊರೊನಾ ವೈರಸ್‌ನಿಂದಾಗಿ ಸ್ಥಗಿತಗೊಂಡಿದ್ದ ಲೇಹ್‌ ಮತ್ತು ಜಮ್ಮು ನಡುವಿನ ವಿಮಾನ ಸಂಚಾರವು ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ನಾಗರಿಕ ವಿಮಾನಯಾನ ಸಚಿವಾಲಯವು ಕೊರೊನಾ ಸೋಂಕಿನಿಂದಾಗಿ ಮಾರ್ಚ್‌ ತಿಂಗಳಲ್ಲಿ ವಿಮಾನ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿತ್ತು.

ನಾಗರಿಕ ವಿಮಾನಯಾನ ಸಚಿವಾಲಯವು ಲಡಾಖ್ ಸ್ವಾಯತ್ತ ಗುಡ್ಡಗಾಡು ಅಭಿವೃದ್ಧಿ ಮಂಡಳಿಯ (ಎಲ್‌ಎಎಚ್‌ಡಿಸಿ) ಮನವಿ ಮೇರೆಗೆ ಗುರುವಾರದಿಂದ ಲೇಹ್ ಮತ್ತು ಜಮ್ಮು ವಲಯಗಳ ನಡುವೆ ಏರ್ ಇಂಡಿಯಾ ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಮಾನಗಳು ಪ್ರತಿ ಭಾನುವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸಲಿವೆ. ವಿಮಾನ ಸಂಚಾರ ಪುನರಾರಂಭವು ಹಲವಾರು ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ಪ್ರಯೋಜನಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು