ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆ: ಮರ್ಸಿಡಿಸ್ ಘಟಕಕ್ಕೆ ನುಗ್ಗಿದ ಚಿರತೆ ಸೆರೆ!

Last Updated 21 ಮಾರ್ಚ್ 2022, 10:28 IST
ಅಕ್ಷರ ಗಾತ್ರ

ಪುಣೆ: ಮಹಾರಾಷ್ಟ್ರದ ಪುಣೆಯ ಮರ್ಸಿಡಿಸ್ ಬೆಂಝ್ ಐಷಾರಾಮಿ ಕಾರು ತಯಾರಿಕಾ ಘಟಕದಲ್ಲಿ ಸೋಮವಾರ ಚಿರತೆ ಪ್ರತ್ಯಕ್ಷಗೊಂಡಿದೆ.

ಇದರಿಂದ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಗೂ ಚಿರತೆಯನ್ನು ಸೆರೆಹಿಡಿಯಲಾಗಿದೆ. ಇದರಿಂದಾಗಿ ಕೆಲಸಗಾರರು ನಿಟ್ಟುಸಿರು ಬಿಡುವಂತಾಯಿತು.

ಪುಣೆ ನಗರದಿಂದ 35 ಕಿ.ಮೀ. ದೂರದಲ್ಲಿರುವ ಕುರುಲಿ ಗ್ರಾಮದ ಸಮೀಪದಲ್ಲಿರುವ ಮರ್ಸಿಡಿಸ್ ಘಟಕದಲ್ಲಿ ಸತತ ಆರು ಗಂಟೆಗಳ ಕಾರ್ಯಾಚರಣೆಯ ಬಳಿಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಯಶಸ್ವಿಯಾದರು.

ಸೋಮವಾರ ಮುಂಜಾನೆ 5ರ ವೇಳೆಗೆ ಚಿರತೆ ಪತ್ತೆಯಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ರಕ್ಷಣಾ ತಂಡದವರುಬೆಳಿಗ್ಗೆ 11.30ರ ಸುಮಾರಿಗೆ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT