ಭಾನುವಾರ, ನವೆಂಬರ್ 28, 2021
21 °C

ಕಾಶ್ಮೀರ: ವಲಸೆ ಕಾರ್ಮಿಕನ ಹತ್ಯೆ ಮಾಡಿದ ಉಗ್ರನನ್ನು ಕೊಂದ ಭದ್ರತಾ ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

AFP

ಶೋಪಿಯಾನ್: ಕಾಶ್ಮೀರದಲ್ಲಿ ನೆಲೆಸಿದ್ದ ಉತ್ತರ ಪ್ರದೇಶದ ಕಾರ್ಮಿಕರೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಉಗ್ರ ಆದಿಲ್‌ ವನಿಯನ್ನು ಭದ್ರತಾ ಪಡೆ ಬುಧವಾರ ಹೊಡೆದುರುಳಿಸಿದೆ. ಆತ ನಿಷೇಧಿತ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶೋಪಿಯಾನ್ ಪ್ರಾಂತ್ಯದ ಕಮಾಂಡರ್‌ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯ ದ್ರಗಾಡ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆ ಬುಧವಾರ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಯೋಧರು ಗಾಯಗೊಂಡಿದ್ದಾರೆ.

ಎರಡು ವಾರಗಳಲ್ಲಿ 15 ಉಗ್ರರನ್ನು ಹೊಡೆದುರುಳಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್‌ಪುರದ ಕಾರ್ಮಿಕರೊಬ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆದಿಲ್‌ ವನಿಯನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್‌ ಕುಮಾರ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು